Exodus 32:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ಅವರಿಗೆ, “ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
Kannada BSI Bible 2016
ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾನು - ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಬಸವ ಉಂಟಾಯಿತು ಅಂದನು.
Kannada Bible (KNCL) BSI 2016
ಅದಕ್ಕೆ ನಾನು, “ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,” ಎಂದೆ. ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು.