Exodus 32:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
Kannada BSI Bible 2016
ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.
Kannada Bible (KNCL) BSI 2016
ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.