Exodus 32:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.
Kannada BSI Bible 2016
ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕ್ರಮವಿಲ್ಲದೆ ಸ್ವೇಚ್ಫೆಯಾಗಿ ನಡೆದುಕೊಳ್ಳುವದನ್ನು ಮೋಶೆ ನೋಡಿ ಪಾಳೆಯದ ಬಾಗಲಲ್ಲಿ ನಿಂತುಕೊಂಡು - ಯೆಹೋವನ ಪಕ್ಷದವರೆಲ್ಲರು ನನ್ನ ಬಳಿಗೆ ಬರಬೇಕು ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿ ಬಂದರು.
Kannada Bible (KNCL) BSI 2016
ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.