Exodus 32:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.
Kannada BSI Bible 2016
ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.
Kannada Bible (KNCL) BSI 2016
ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.