Exodus 32:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಈ ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
Kannada BSI Bible 2016
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಹೋಗಿ - ಅಯ್ಯೋ ಅಯ್ಯೋ, ಈ ಜನರು ಮಹಾಪಾಪವನ್ನು ಮಾಡಿದ್ದಾರೆ; ಚಿನ್ನದ ದೇವರನ್ನು ಮಾಡಿಕೊಂಡಿದ್ದಾರೆ. ಆದರೂ ನೀನು ಕರುಣವಿಟ್ಟು ಅವರ ಪಾಪವನ್ನು ಕ್ಷವಿುಸಬೇಕು.
Kannada Bible (KNCL) BSI 2016
ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.