Exodus 32:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.
Kannada BSI Bible 2016
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.
Kannada Bible (KNCL) BSI 2016
ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.