Exodus 33:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
Kannada BSI Bible 2016
ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.
Kannada Bible (KNCL) BSI 2016
ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.