Exodus 33:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
Kannada BSI Bible 2016
ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ಅನುಗ್ರಹ ದೊರಕಿತೆಂಬದು ನೀನೇ ನಮ್ಮ ಸಂಗಡ ಬರುವದರಿಂದಲೇ ಹೊರತು ಬೇರೆ ಯಾತರಿಂದ ತಿಳಿದುಬರುವದು? ಇದರಿಂದ ನಾನೂ ನಿನ್ನ ಪ್ರಜೆಗಳಾದ ಇವರೂ ಭೂವಿುಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷವಾಗಿದ್ದೇವೆಂಬದು ತೋರುವದು ಅಂದನು.
Kannada Bible (KNCL) BSI 2016
ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.