Exodus 33:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮಹಿಮೆಯು ಆ ಸ್ಥಳದ ಮೂಲಕ ದಾಟಿಹೋಗುವುದು. ನಾನು ನಿನ್ನನ್ನು ಆ ಬಂಡೆಯ ದೊಡ್ಡದಾದ ಬಿರುಕಿನಲ್ಲಿ ಇರಿಸುವೆನು; ನಾನು ದಾಟಿ ಹೋಗುವಾಗ ನನ್ನ ಕೈಯಿಂದ ನಿನ್ನನ್ನು ಮುಚ್ಚುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.
Kannada BSI Bible 2016
ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಭಾವವು ನಿನ್ನೆದುರಾಗಿ ದಾಟಿಹೋಗುವ ಕಾಲದಲ್ಲಿ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನಿನ್ನ ಮುಂದೆ ದಾಟಿಹೋಗುವ ತನಕ ನಿನ್ನ ಮೇಲೆ ಕೈ ಮುಚ್ಚುವೆನು;
Kannada Bible (KNCL) BSI 2016
ನನ್ನ ಮಹಿಮೆ ನಿನ್ನೆದುರಿಗೆ ದಾಟಿ ಹೋಗುವಾಗ ನಾನು ಆ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ, ನಿನ್ನ ಮುಂದೆ ನಾನು ಹಾದುಹೋಗುವ ತನಕ ನಿನ್ನನ್ನು ನನ್ನ ಕೈಯಿಂದ ಮುಚ್ಚುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನನ್ನ ಮಹಿಮೆಯು ಹಾದುಹೋಗುವಾಗ, ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ, ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.