Exodus 33:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.
Kannada BSI Bible 2016
ಕರ್ತನು ಮೋಶೆಗೆ--ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನೀವು ನನ್ನ ಆಜ್ಞೆಗಳಿಗೆ ಬೊಗ್ಗದವರೇ. ನಾನು ಒಂದು ಕ್ಷಣಮಾತ್ರ ನಿಮ್ಮ ಮಧ್ಯದಲ್ಲಿ ಬರುವದಾದರೆ ನೀವು ನಿರ್ಮೂಲವಾಗಿ ಹೋದೀರಿ, ನೋಡಿಕೊಳ್ಳಿರಿ. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ ನಿಮಗೆ ನಾನು ಏನು ಮಾಡಬೇಕೆಂಬದನ್ನು ಆಲೋಚಿಸಿಕೊಳ್ಳುವೆನು ಅಂದನು.
Kannada Bible (KNCL) BSI 2016
ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.