Exodus 33:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
Kannada BSI Bible 2016
ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಡೇರೆಯನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿಸುತ್ತಿದ್ದನು. ಅದಕ್ಕೆ ದೇವದರ್ಶನದ ಡೇರೆ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರು ಪಾಳೆಯದ ಹೊರಗಿದ್ದ ದೇವದರ್ಶನದ ಡೇರೆಗೆ ಹೋಗುತ್ತಿದ್ದರು.
Kannada Bible (KNCL) BSI 2016
ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ ‘ದೇವದರ್ಶನದ ಗುಡಾರ’ ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.