Exodus 33:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಆ ಗುಡಾರದೊಳಗೆ ಹೋಗುವಾಗ ಜನರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
Kannada BSI Bible 2016
ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆ ಡೇರೆಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲಿ ನಿಂತು ಮೋಶೆಯು ಆ ಡೇರೆಯೊಳಕ್ಕೆ ಹೋಗುವತನಕ ಅವನ ಹಿಂದೆ ನೋಡುತ್ತಿದ್ದರು.
Kannada Bible (KNCL) BSI 2016
ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಗೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು.