Exodus 34:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
Kannada BSI Bible 2016
ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.
Kannada Bible (KNCL) BSI 2016
ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.