Exodus 34:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
Kannada BSI Bible 2016
ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
Kannada Bible (KNCL) BSI 2016
“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.