Exodus 34:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.
Kannada BSI Bible 2016
ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದವರೆಗೂ ಉಳಿಸಬಾರದು.
Kannada Bible (KNCL) BSI 2016
ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.