Exodus 34:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
Kannada BSI Bible 2016
ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.
Kannada Bible (KNCL) BSI 2016
ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.