Exodus 34:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.
Kannada BSI Bible 2016
ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನು ಯೆಹೋವನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಆ ಸಂಗತಿ ಅವನಿಗೆ ತಿಳಿಯಲಿಲ್ಲ.
Kannada Bible (KNCL) BSI 2016
ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.