Exodus 34:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.
Kannada BSI Bible 2016
ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಪ್ರದೇಶದಲ್ಲಿ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಮುಂದೆ ಮೇಯಕೂಡದು ಎಂದು ಹೇಳಿದನು.
Kannada Bible (KNCL) BSI 2016
ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು. ದನಕುರಿಗಳೂ ಈ ಬೆಟ್ಟದ ಮುಂದೆ ಮೇಯಕೂಡದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು. ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಆ ಬೆಟ್ಟದ ಎದುರಿನಲ್ಲಿ ದನಕುರಿಗಳು ಸಹ ಮೇಯಬಾರದು,” ಎಂದು ಹೇಳಿದರು.