Exodus 34:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಾದನಂತರ, ಇಸ್ರೇಲರೆಲ್ಲರೂ ಮೋಶೆಯ ಬಳಿಗೆ ಬಂದರು. ಯೆಹೋವನು ಸೀನಾಯಿ ಬೆಟ್ಟದಲ್ಲಿ ತನಗೆ ಕೊಟ್ಟ ಆಜ್ಞೆಗಳನ್ನು ಮೋಶೆಯು ಅವರಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
Kannada BSI Bible 2016
ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಇಸ್ರಾಯೇಲ್ಯರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
Kannada Bible (KNCL) BSI 2016
ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರ ಬಂದರು. ಆಗ ಅವನು ಅವರಿಗೆ, ಯೆಹೋವ ದೇವರು ತನಗೆ ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳನ್ನೆಲ್ಲಾ ಆಜ್ಞಾಪಿಸಿ ಹೇಳಿದನು.