Exodus 34:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ತನ್ನ ಮುಖಕ್ಕೆ ಮುಸುಕು ಹಾಕಿಕೊಂಡಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.
Kannada BSI Bible 2016
ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ಮುಖವು ಪ್ರಕಾಶಮಾನವಾಗಿರುವದನ್ನು ಇಸ್ರಾಯೇಲ್ಯರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತಾಡುವದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ತಿರಿಗಿ ಹಾಕಿಕೊಂಡಿರುವನು.
Kannada Bible (KNCL) BSI 2016
ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯ ಮುಖವು ಪ್ರಕಾಶಿಸುವುದನ್ನು ಇಸ್ರಾಯೇಲರು ನೋಡಿದ್ದರು. ಮೋಶೆ ದೇವರ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ಅವನು ತನ್ನ ಮುಖದ ಮೇಲೆ ತಿರುಗಿ ಮುಸುಕನ್ನು ಹಾಕಿಕೊಳ್ಳುತ್ತಿದ್ದನು.