Exodus 34:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
Kannada BSI Bible 2016
ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೋಶೆ ಮೊದಲಿದ್ದ ಹಲಿಗೆಗಳಂತೆ ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
Kannada Bible (KNCL) BSI 2016
ಅಂತೆಯೇ ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡನು. ಬೆಳಿಗ್ಗೆ ಎದ್ದು ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಕಲ್ಲಿನ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲೆ ಹೋದನು.