Exodus 34:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದು ಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
Kannada BSI Bible 2016
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೇಘದಿಂದ ಆವರಿಸಲ್ಪಟ್ಟವನಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ನಾಮವನ್ನು ಪ್ರಕಟಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.