Exodus 34:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
Kannada BSI Bible 2016
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ:- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;
Kannada Bible (KNCL) BSI 2016
ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ