Exodus 35:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
Kannada BSI Bible 2016
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
Kannada Bible (KNCL) BSI 2016
ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.