Exodus 35:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಪುಣರಾದ ಸ್ತ್ರೀಯರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.
Kannada BSI Bible 2016
ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲನ್ನೂ ನಾರಿನ ನೂಲನ್ನೂ ನೂತು ಆ ನೂಲನ್ನು ತಂದುಕೊಟ್ಟರು.
Kannada Bible (KNCL) BSI 2016
ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಶಲತೆ ಬಲ್ಲ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ದಾರಗಳನ್ನು ಮತ್ತು ನಯವಾದ ನಾರುಮಡಿಯನ್ನು ತಂದರು.