Exodus 35:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
Kannada BSI Bible 2016
ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.
Kannada Bible (KNCL) BSI 2016
ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.