Exodus 35:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.
Kannada BSI Bible 2016
ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವದಕ್ಕೆ ಸಹ ಅವನಿಗೂ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನಿಗೂ ವರಕೊಟ್ಟಿದ್ದಾನೆ.
Kannada Bible (KNCL) BSI 2016
ಅದೂ ಅಲ್ಲದೆ, ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೆ ಮತ್ತು ದಾನ್‍ಕುಲದ ಅಹೀಸಾಮಾಕನ ಮಗ ಒಹೋಲೀಯಾಬನಿಗೆ ವಿಶೇಷ ವರವನ್ನು ಕೊಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ.