Exodus 36:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.
Kannada BSI Bible 2016
ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಚಲೇಲನೂ ಒಹೊಲೀಯಾಬನೂ ಎಲ್ಲವನ್ನು ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮಾಡುವರು; ಮತ್ತು ಬೇರೆ ಜಾಣರೆಲ್ಲರು, ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೋಸ್ಕರ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮತಿಳಿದಿರುವವರು, ಅವರೊಂದಿಗೆ ಕೆಲಸಮಾಡುವರು ಅಂದನು.
Kannada Bible (KNCL) BSI 2016
“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.