Exodus 36:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.
Kannada BSI Bible 2016
ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.
Kannada Bible (KNCL) BSI 2016
ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು.