Exodus 36:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
Kannada BSI Bible 2016
ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯಾರಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಇಟ್ಟಿದ್ದನೋ ಯಾರಾರನ್ನು ಈ ಕೆಲಸಮಾಡುವದಕ್ಕೆ ಹೃದಯ ಪ್ರೇರಿಸಿತೋ ಆ ಜಾಣರೆಲ್ಲರನ್ನೂ ಮೋಶೆ ತನ್ನ ಹತ್ತಿರಕ್ಕೆ ಕರಿಸಿದನು.
Kannada Bible (KNCL) BSI 2016
ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.