Exodus 36:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
Kannada BSI Bible 2016
ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಾಯೇಲ್ಯರು ಪ್ರತಿದಿನದ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಹೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
Kannada Bible (KNCL) BSI 2016
ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.