Exodus 36:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
Kannada BSI Bible 2016
ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
Kannada Bible (KNCL) BSI 2016
ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಒಂದು ತೆರೆಯನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಿದರು.