Exodus 36:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
Kannada BSI Bible 2016
ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.
Kannada Bible (KNCL) BSI 2016
ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಿದರು.