Exodus 36:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.
Kannada BSI Bible 2016
ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾದದ್ದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿರುತ್ತಾರೆಂದು ಹೇಳಲಾಗಿ ಮೋಶೆ -
Kannada Bible (KNCL) BSI 2016
“ಸರ್ವೇಶ್ವರ ಆಜ್ಞಾಪಿಸಿದ ಕೆಲಸಕ್ಕೆ ಬೇಕಾದುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ಸಂಗಡ ಮಾತನಾಡಿ, “ಯೆಹೋವ ದೇವರು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ಕಾಣಿಕೆಗಳನ್ನು ಈ ಜನರು ತರುತ್ತಿದ್ದಾರೆ,” ಎಂದು ಹೇಳಿದರು.