Exodus 36:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
Kannada BSI Bible 2016
ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೆಲಸದವರಲ್ಲಿದ್ದ ಜಾಣರೆಲ್ಲರು ಹೊಸೆದ ನಾರಿನ ಹತ್ತುತಾನು ಬಟ್ಟೆಗಳಿಂದ ಗುಡಾರವನ್ನು ಮಾಡಿ ಆ ಬಟ್ಟೆಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
Kannada Bible (KNCL) BSI 2016
ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು.