Exodus 37:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವನು ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿ ಅವುಗಳನ್ನು ಇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.
Kannada BSI Bible 2016
ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಜನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು.
Kannada Bible (KNCL) BSI 2016
ಮೇಜನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಎರಕ ಹೊಯ್ದು, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಿದರು.