Exodus 37:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.
Kannada BSI Bible 2016
ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.
Kannada Bible (KNCL) BSI 2016
ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು.