Exodus 37:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಕೊಂಬೆಗಳಲ್ಲಿ ಮೂರುಮೂರು ಹೂವುಗಳಿದ್ದವು. ಈ ಹೂವುಗಳು ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಹೂವುಗಳಂತೆ ಮಾಡಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.
Kannada BSI Bible 2016
ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಕೊಂಬೆಯಲ್ಲಿ ಬಾದಾವಿು ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು.
Kannada Bible (KNCL) BSI 2016
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿದ್ದವು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು ಮೊಗ್ಗು ಪುಷ್ಟಗಳಿದ್ದವು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇದ್ದವು.