Exodus 37:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೀಪಸ್ತಂಭದ ಕಂಬದಲ್ಲಿ ಇನ್ನೂ ನಾಲ್ಕು ಹೂವುಗಳಿದ್ದವು. ಅವುಗಳು ಸಹ ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಯ ಹೂವುಗಳಂತೆ ಮಾಡಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.
Kannada BSI Bible 2016
ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪಸ್ತಂಭದ ಕಡ್ಡಿಯಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾವಿು ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು.
Kannada Bible (KNCL) BSI 2016
ದೀಪವೃಕ್ಷ ಕಡ್ಡಿಯಲ್ಲಿ ಮೊಗ್ಗುಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು.