Exodus 37:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಆ ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.
Kannada BSI Bible 2016
ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆ ಇತ್ತು.
Kannada Bible (KNCL) BSI 2016
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿತ್ತು, ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳಿದ್ದವು.