Exodus 37:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.
Kannada BSI Bible 2016
ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು.
Kannada Bible (KNCL) BSI 2016
ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.