Exodus 37:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.
Kannada BSI Bible 2016
ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು. ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ಗೋಟು ಕಟ್ಟಿದನು.
Kannada Bible (KNCL) BSI 2016
ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿದರು. ಅದರ ಸುತ್ತಲೂ ಬಂಗಾರದ ಗೋಟನ್ನು ಕಟ್ಟಿಸಿದರು.