Exodus 37:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
Kannada BSI Bible 2016
ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.
Kannada Bible (KNCL) BSI 2016
ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.
Recommended Reading