Exodus 38:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
Kannada BSI Bible 2016
ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯಜ್ಞವೇದಿಯನ್ನು ಜಾಲೀಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
Kannada Bible (KNCL) BSI 2016
ಅವನು ಬಲಿಪೀಠವನ್ನು ಜಾಲಿಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.

Recommended Reading