Exodus 38:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
Kannada BSI Bible 2016
ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.
Kannada Bible (KNCL) BSI 2016
ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳಿದ್ದವು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು.