Exodus 38:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
Kannada BSI Bible 2016
ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.
Kannada Bible (KNCL) BSI 2016
ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು.