Exodus 38:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
Kannada BSI Bible 2016
ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳೂ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.
Kannada Bible (KNCL) BSI 2016
ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳೂ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳಿದ್ದವು. ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಮೇಲಿನ ಕಟ್ಟುಗಳು ಬೆಳ್ಳಿಯದ್ದಾಗಿದ್ದವು.