Exodus 38:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
Kannada BSI Bible 2016
ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಗಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳೂ ಬೆಳ್ಳಿಯವು.
Kannada Bible (KNCL) BSI 2016
ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳೂ ಬೆಳ್ಳಿಯವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಿಗೆ ನಾಲ್ಕು ಸ್ತಂಭಗಳು, ಆ ಕಂಬಗಳಿಗೆ ನಾಲ್ಕು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಅವುಗಳ ಕೊಂಡಿಗಳು ಬೆಳ್ಳಿಯದ್ದಾಗಿದ್ದವು. ಅವುಗಳ ಬೋದಿಗಳ ಹೊದಿಕೆ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದ್ದಾಗಿದ್ದವು.