Exodus 38:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
Kannada BSI Bible 2016
ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.
Kannada Bible (KNCL) BSI 2016
ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.