Exodus 38:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
Kannada BSI Bible 2016
ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆ ಬಲ್ಲವನೂ ವಿಚಿತ್ರವಾದ ಕೆಲಸವನ್ನು ಕಲ್ಪಿಸುವವನೂ ನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲಿನಿಂದ ಬುಟೇದಾರೀ ಕೆಲಸಮಾಡುವವನೂ ಆಗಿದ್ದನು.
Kannada Bible (KNCL) BSI 2016
ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.